ಕ್ರೀಡೆ

ಆರ್​ಸಿಬಿ ಆಟಗಾರರನ್ನು ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ವಿಮಾನದ ಮೂಲಕ ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಧ್ವಜ ನೀಡಿ ಸ್ವಾಗತಿಸಿದರು. ಆರ್​ಸಿಬಿ ಆಟಗಾರರನ್ನು ನೋಡಲು ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಕೊಹ್ಲಿ ಆ್ಯಂಡ್​ ಟೀಂಗೆ.

ಚಿನ್ನಸ್ವಾಮಿ ಸ್ಟೇಡಿಯಂ  ಫುಲ್ ಆಗಿದ್ದು, ಒಳಗೆ ಪ್ರವೇಶ ನೀಡುತ್ತಿಲ್ಲ. ಹೀಗಾಗಿ, ಜನರು ಒಳಗೆ ನುಗ್ಗಲು ತಳ್ಳಾಟ ನಡೆಸುತ್ತಿದ್ದಾರೆ. ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಎಲ್ಲಿ ನೋಡಿದರೂ ಆರ್​ಸಿಬಿ ಆರ್​ಸಿಬಿ ಎಂಬ ಘೋಷಣೆಗಳೇ ಕೇಳುತ್ತಿದ್ದು, ಆರ್​ಸಿಬಿ ಕ್ರೇಜ್ ಇನ್ನಷ್ಟು ಹೆಚ್ಚಾಗಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಗೇಟ್​ ನಂಬರ್ 6ರ ಬಳಿ ಗೇಟ್ ಹತ್ತಲು ಹೋದ ಯುವಕ ಬಿದ್ದು ಕಾಲು ಮುರಿದುಕೊಂಡಿದ್ದಾನೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.



ಕಾಮೆಂಟ್ ಬಿಡಿ

Join Us