ಕ್ರೀಡೆ

ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸೀಸನ್​ನ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ

ಮುಲ್ಲನ್‌ಪುರದಲ್ಲಿ ಶ್ರೇಯಸ್ ಅಯ್ಯರ್ ಅವರ ಬ್ಯಾಟ್ ಕೆಲಸ ಮಾಡಲಿಲ್ಲ. ಇದು ಪಂಜಾಬ್ ಕಿಂಗ್ಸ್‌ನ ತವರು ಮೈದಾನವಾಗಿದ್ದರೂ, ಇಲ್ಲಿನ ಪಿಚ್‌ನಲ್ಲಿ ನಾಯಕ ಕಷ್ಟಪಡುತ್ತಿರುವುದನ್ನು ಕಾಣಬಹುದಾಗಿದೆ. ಅಯ್ಯರ್ ಇಲ್ಲಿ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಬಾರಿ ಒಂದೇ ಅಂಕೆಯಲ್ಲಿ ಔಟಾಗಿದ್ದಾರೆ. ಮುಲ್ಲನ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ 10 ರನ್ ಗಳಿಸಿದ್ದ ಅಯ್ಯರ್, ಮುಂದಿನ ಪಂದ್ಯದಲ್ಲಿ 9 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಮೂರನೇ ಇನ್ನಿಂಗ್ಸ್‌ನಲ್ಲಿ ಅಯ್ಯರ್​ಗೆ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ. ನಾಲ್ಕನೇ ಪಂದ್ಯದಲ್ಲಿ ಕೇವಲ 6 ರನ್​ಗಳಿಗೆ ಸುಸ್ತಾಗಿದ್ದ ಅಯ್ಯರ್, ಮುಂದಿನ ಪಂದ್ಯದಲ್ಲಿ ಕೇವಲ 2 ರನ್​ಗಳಿಸಲಷ್ಟೇ ಶಕ್ತರಾದರು.

ಪಂಜಾಬ್ ಕಿಂಗ್ಸ್ ತಂಡ ಆರ್‌ಸಿಬಿ ವಿರುದ್ಧ ಸಂಪೂರ್ಣವಾಗಿ ಶರಣಾಗಿದ್ದು, 14.1 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲೌಟ್ ಆಗಿದೆ. ಈ ತಂಡದ ಇಬ್ಬರು ಬ್ಯಾಟ್ಸ್‌ಮನ್‌ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಉಳಿದ 8 ಬ್ಯಾಟ್ಸ್‌ಮನ್‌ಗಳು ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ. ಮಾರ್ಕಸ್ ಸ್ಟೊಯಿನಿಸ್ 26 ರನ್ ಗಳಿಸಿ ಅತಿ ಹೆಚ್ಚು ಸ್ಕೋರರ್ ಎನಿಸಿಕೊಂಡರೆ, ಪ್ರಭ್ಸಿಮ್ರಾನ್ ಸಿಂಗ್ 18 ರನ್ ಮತ್ತು ಅಜ್ಮತುಲ್ಲಾ ಒಮರ್ಜೈ 18 ರನ್ ಗಳಿಸಿದರು.

ಐಪಿಎಲ್ ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಈ ಸೀಸನ್​ನ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕೇವಲ 101 ರನ್‌ಗಳಿಗೆ ಆಲೌಟ್ ಆಯಿತು. ಆರ್‌ಸಿಬಿ ಸುಲಭವಾಗಿ ಗುರಿ ಮುಟ್ಟಿತು. ಇದು ಆರ್‌ಸಿಬಿಗೆ ಐಪಿಎಲ್‌ನಲ್ಲಿ ನಾಲ್ಕನೇ ಫೈನಲ್ ಪ್ರವೇಶ. ಇತ್ತ ಸೋತ ಪಂಜಾಬ್ ಎಲಿಮಿನೇಟರ್‌ನಲ್ಲಿ ಗೆದ್ದ ತಂಡವನ್ನು ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ.

ಪಂಜಾಬ್​ನ ಮುಲ್ಲನ್‌ಪುರದ ಮಹಾರಾಜ ಯದ್ವಿಂದರ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025 ರ ಐಪಿಎಲ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದ ಆರ್​ಸಿಬಿ, ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್, ಆರ್​ಸಿಬಿ ಬೌಲರ್​ಗಳ ಮಾರಕ ದಾಳಿಯ ಮುಂದೆ ಕೇವಲ 101 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಆರ್​ಸಿಬಿ ಸುಲಭವಾಗಿ ಬೆನ್ನಟ್ಟಿತು. ಇನ್ನು ಆರ್​ಸಿಬಿ ವಿರುದ್ಧ ಸೋತಿರುವ ಪಂಜಾಬ್, ನಾಳೆ ನಡೆಯಲ್ಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವನ್ನು, ಕ್ವಾಲಿಫೈಯರ್ 2 ರಲ್ಲಿ ಎದುರಿಸಲಿದೆ. ಆ ಪಂದ್ಯದಲ್ಲಿ ಗೆದ್ದ ತಂಡ ಬರುವ ಮಂಗಳವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಎದುರಿಸಲಿದೆ.

ಕಾಮೆಂಟ್ ಬಿಡಿ

Join Us