ಭಾರತ ಕ್ರಿಕೆಟ್‌ನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್
ಭಾರತ ಕ್ರಿಕೆಟ್‌ನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಸರಣಿ ನಿರಾಶೆಯ ನೆನಪನ್ನು ತಂದುಕೊಟ್ಟಿದೆ. ಪರ್ತ್‌ನಲ್ಲಿನ ಮೊದಲ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆದ ಬಳಿಕ, ಅಡಿಲೇಡ್ ಓವಲ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲೂ ಅವರು ಸೊನ್ನೆಗೆ ಪೆವಿಲಿಯನ್‌ಗೆ ಮರಳಿದರು. ಜೇವಿಯರ್ ಬಾರ್ಟ್ಲೆಟ್ ಅವರ ಎಸೆತಕ್ಕೆ ಎಲ್‌ಬಿ ಆಗಿ, ಕೇವಲ ನಾಲ್ಕು ಎಸೆತಗಳನ್ನು ಎದುರಿಸಿ ಔಟ್ ಆದರು. ಇದೇ ಮೊದಲು ಕೊಹ್ಲಿ ತಮ್ಮ ಏಕದಿನ ವೃತ್ತಿ ಜೀವನದಲ್ಲಿ ಸತತ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
ಆಸ್ಟ್ರೇಲಿಯಾದ ತಮ್ಮ ನೆಚ್ಚಿನ ಗ್ರೌಂಡ್ ನಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಕೊಹ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಮಿಷೆಲ್ ಮಾರ್ಶ್ ನೇತೃತ್ವದ ಆಸ್ಟ್ರೇಲಿಯಾ ತಂಡ ಎದುರು ತಡವರಿಸುತ್ತಿರುವ ಟೀಂ ಇಂಡಿಯಾ ಬ್ಯಾಟರ್ ಗಳು ನಿರಾಸ ಪ್ರದರ್ಶನ ತೋರುತ್ತಿದ್ದಾರೆ. ಇನ್ನಿಂಗ್ಸ್ 20 ಎಸೆತಗಳಲ್ಲಿ ರೋಹಿತ್ ಶರ್ಮಾ ಕೇವಲ 6 ರನ್ ಗಳಿಸಿದ್ದರು, ಇದು 2019ರ ಬಳಿಕ ಏಕದಿನ ಮಾದರಿಯಲ್ಲಿ ರೋಹಿತ್ ಗಳಿಸಿದ ಅತ್ಯಂತ ಕಳಪೆ ಆರಂಭ ಇದಾಗಿದೆ.
ಇದುವರೆಗೂ 314 ಏಕದಿನ ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಡಕ್ ಔಟ್ ಆಗುವ ಆಗಿದ್ದಾರೆ. ಈ ಹಿಂದೆ 2021ರಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಅಹಮ್ಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಸತತವಾಗಿ ಶೂನ್ಯಕ್ಕೆ ಔಟ್ ಆಗಿದ್ದರು.
ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ದಿನ ಮಾದರಿಯಲ್ಲಿ ಎರಡನೇ ಬಾರಿಗೆ ಕೊಹ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಆಸೀಸ್ ವಿರುದ್ಧ ಕೊಹ್ಲಿ ಇದು 4ನೇ ಬಾರಿಗೆ ಶೂನ್ಯಕ್ಕೆ ಔಟ್ ಆಗಿದ್ದಾರೆ. ಇದುವರೆಗೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ 40ನೇ ಬಾರಿಗೆ ಶೂನ್ಯಕ್ಕೆ ಔಟ್ ಆಗಿದ್ದು, ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಕಾಮೆಂಟ್ ಬಿಡಿ