ಆರೋಪಿ ಕೃಷ್ಣ ಜೆ ರಾವ್ ನ್ಯಾಯಾಂಗ ಬಂಧನ; ತಂದೆ ಪಿ.ಜಿ.ಜಗನ್ನಿವಾಸ ರಾವ್ ಜಾಮೀನು ಮಂಜೂರು
ಪುತ್ತೂರು: ಯುವತಿಯೊಬ್ಬಳನ್ನು ಪ್ರೀತಿಸಿ ವಂಚನೆ ಮಾಡಿ, ಮಗುವಿನ ಜನನಕ್ಕೆ ಕಾರಣವಾಗಿದ್ದಲ್ಲದೇ ಮದುವೆಯಾಗದೇ ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ, ಆರೋಪಿ ಶ್ರೀಕೃಷ್ಣ ಜೆ ರಾವ್‌ನನ್ನು ಪೊಲೀಸರು ಶುಕ್ರವಾರ ರಾತ್ರಿ ಮೈಸೂರಿನ ಟಿ.ನರಸೀಪುರದಲ್ಲಿ ಬಂಧಿಸಿದ್ದಾರೆ.ಶನಿವಾರ ಸಂಜೆ ಆತನನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ಪುತ್ರ ಕೃಷ್ಣ ಜೆ ರಾವ್ ತಲೆ ಮರೆಸಿಕೊಳ್ಳಲು ಸಹಕರಿಸಿದ ಹಿನ್ನೆಲೆಯಲ್ಲಿ ಆತನ ತಂದೆ ಪಿ.ಜಿ.ಜಗನ್ನಿವಾಸ ರಾವ್ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿ, ವಶಕ್ಕೆ ತೆಗೆದುಕೊಂಡಿದ್ದರು. ಪುತ್ರನೊಂದಿಗೆ ಸಂಜೆ ತಂದೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ ನ್ಯಾಯಾಲಯ ಪಿ.ಜಿ. ಜಗನ್ನಿವಾಸ ರಾವ್‌ಗೆ ಜಾಮೀನು ಮಂಜೂರು ಮಾಡಿದೆ.
ಕಾಮೆಂಟ್ ಬಿಡಿ