ಇನ್ಸ್‌ಪೆಕ್ಟರ್ ಕಾಮಪುರಾಣ ಬಯಲು: ಆಡಿಯೋ, ಸಿಸಿಟಿವಿ ದೃಶ್ಯಾವಳಿ ವೈರಲ್
ಮೂಡುಬಿದಿರೆ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಕೇಳಿಬಂದಿವೆ. ಇನ್ಸ್‌ಪೆಕ್ಟರ್ ಕಾಮಪುರಾಣ ಬಯಲು ಮಾಡುವ ಇನ್ನೊಂದು ಆಡಿಯೋ ಮತ್ತು ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.
ಮಹಿಳೆಯೊಬ್ಬಳು ತನ್ನ ಗಂಡನನ್ನು ಬಂಧನದಿಂದ ಬಿಡುಗಡೆ ಮಾಡುವ ವಿಚಾರದಲ್ಲಿ ಮಹಿಳೆಗೆ ಒತ್ತಡ ಹಾಕಿದ್ದಾಗಿ ಆರೋಪಿಸಲಾಗಿದೆ. ಈ ಪ್ರಕರಣದ ಹಿನ್ನೆಲೆಲ್ಲಿಯೇ ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ನಡುವೆ ನಡೆದ ಮಾತುಕತೆಯ ಆಡಿಯೋ ಹೊರಬಂದಿದ್ದು, ಇದರಲ್ಲಿ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವುದು ಕೇಳಿಬರುತ್ತದೆ.
ಕಾಮೆಂಟ್ ಬಿಡಿ