ಕ್ರೈಂ

ಐಷಾರಾಮಿ ಕಾರಿನಲ್ಲಿ ಜಾನುವಾರು; ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಆರೋಪಿಗಳನ್ನು ಬಂಧಿಸಿದ ಮೂಡಬಿದ್ರೆ ಪೊಲೀಸರು

ಮೂಡಬಿದ್ರೆ : ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ.
ಮೂಡಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಇವರಿಂದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ರೌಂಡ್ಸ್‌ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳ ಕಾರನ್ನು ಬೆನ್ನಟ್ಟಿದ್ದಾರೆ. ತಪ್ಪಿಸಿಕೊಳ್ಳಲು ದಾರಿಯಿಲ್ಲದೆ ಆರೋಪಿಗಳು ಮನೆಯೊಂದರ ಕಂಪೌಂಡ್ ಒಳಗೆ ಕಾರು ನುಗ್ಗಿಸಿ ಓಡಿಹೋಗಲು ಯತ್ನಿಸಿದಾಗ ಪೊಲೀಸರು ಅವರನ್ನು ಸುತ್ತುವರೆದು ಹಿಡಿಯುವಲ್ಲಿ ಯಶಸ್ವಿಯಾದರು.

ಕಾಮೆಂಟ್ ಬಿಡಿ

Join Us