ಕದ್ರಿ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ
ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಆದೇಶಿಸಿದ್ದಾರೆ.
ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಕಾರಿನ ದಾಖಲೆಯನ್ನು ದೂರುದಾರರಿಗೆ ವಾಪಸು ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು ಬಳಿಕ 5 ಸಾವಿರ ಲಂಚ ಪಡೆಯುವಾಗ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಸ್ಲಿಂ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.
ಕಾಮೆಂಟ್ ಬಿಡಿ