ಕ್ರೈಂ

ಕಲಂದರ್ ಶಾಫಿ ಕೊಲೆ ಪ್ರಕರಣದಲ್ಲಿ ದೀಪಕ್ , ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ

ಬಂಟ್ವಾಳ: ಅಬ್ದುಲ್ ರಹಿಮಾುನ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ಥಳೀಯರು ಸೇರಿದಂತೆ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಅವರು ನದಿ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ಬಾ ತಿವಿದು, ಕಡಿದರು, ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ಬಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ

ಕಾಮೆಂಟ್ ಬಿಡಿ

Join Us