ಕ್ರೈಂ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ಹೈಕೋರ್ಟ್ ಆದೇಶದಂತೆ, ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಮಾರ್ಚ್ 16ರಿಂದ ಸೆಪ್ಟೆಂಬರ್ 16ರವರೆಗೆ ಆರು ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಆದೇಶ ನೀಡಿದ್ದಾರೆ.

ಈ ಆದೇಶದ ಜಾರಿಗಾಗಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ಪೊಲೀಸರು ಮಾರ್ಚ್ 16ರ ಮಧ್ಯರಾತ್ರಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಭೇಟಿ ನೀಡಿದರು. ಆದರೆ ಅವರು ಮನೆಯಲ್ಲಿ ಇರದೇ ನಾಪತ್ತೆಯಾಗಿದ್ದರಿಂದ, ಪೊಲೀಸರು ಗಡಿಪಾರು ಆದೇಶದ ಪ್ರತಿಯನ್ನು ಮನೆಯ ಗೋಡೆಗೆ ಅಂಟಿಸಿ ಜಾರಿ ಮಾಡಿದ್ದಾರೆ.

ಕಾಮೆಂಟ್ ಬಿಡಿ

Join Us