ಕ್ರೈಂ

ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದ ಅಪಘಾತ; ಮಗು ಸಹಿತ ಮೂವರು ಗಂಭೀರ ಗಾಯ

ಮುಲ್ಕಿ: ಎರಡು ಕಾರುಗಳ ನಡುವೆ ಭೀಕರ ಅವ ಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ  ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ.

ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್ (25), ಅವಿನಾಶ್(23), ಮಗು ಮೈನ್ (2) ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ವುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಟೀಲು ಕಡೆಯಿಂದ ಕುಂದಾಪುರದ ಕಡೆಗೆ ಹೊರಟಿದ್ದ ಕಾರು ಮೂಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುವುತ್ತಿದ್ಯಂತೆ ಮೂಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಭರದಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ವಲ್ಟಿಯಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ಸ್ಥಳೀಯರು ರಕ್ಷಿಸಿ ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ಭೀಕರ ದೃಶ್ಯ ಸ್ಥಳೀಯ ಹಾರ್ಡ್ ವೇರ್ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ನೆರೆಯಾಗಿದೆ.

ಕಾಮೆಂಟ್ ಬಿಡಿ

Join Us