ಕ್ರೈಂ

ಲೈಂಗಿಕ ಕಿರುಕುಳ ಆರೋಪಕ್ಕೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಸ್ಪಷ್ಟನೆ

ಮಂಗಳೂರು:  ತಮ್ಮ ವಿರುದ್ಧದ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಹಣ ಕೇಳಿದ ಆರೋಪಗಳನ್ನು ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜೆ. ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, ಈ ಎಲ್ಲಾ ಆರೋಪಗಳು ಸುಳ್ಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ಅವರ ಪತಿ ಹೇಳಿದ್ರು. ಹೀಗಾಗಿ ಆಕೆಯನ್ನು ರಕ್ಷಿಸಲು ನಾನು ಕಾಂಪೌಂಡ್ ಹಾರಿದ್ದು ನಿಜ ಎಂದಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿ ಸಂದೇಶ್ ಪಿ.ಜಿ. ವಿರುದ್ಧ ತನಿಖೆಗೆ ಮಂಗಳೂರು ಪೊಲೀಸ್​​ ಕಮಿಷನರ್​​ ಸುಧೀರ್​​ ರೆಡ್ಡಿ ಸೂಚನೆ ನೀಡಿದ್ದಾರೆ. ಉತ್ತರ ACP ಶ್ರೀಕಾಂತ್​​ಗೆ ತನಿಖೆಯ ಹೊಣೆ ನೀಡಲಾಗಿದೆ. ಲೈಂಗಿಕ ಕಿರುಕುಳದ ಬಗ್ಗೆ ಈವರೆಗೂ ಯಾವೊಬ್ಬ ಮಹಿಳೆ ಕೂಡ ದೂರು ನೀಡಿಲ್ಲ. ಯಾರಾದರೂ ಸಂತ್ರಸ್ತೆಯರು ಇದ್ದರೆ ಈಗಲೂ ದೂರು ನೀಡಬಹುದು ಎಂದು ಕಮಿಷನರ್​​ ತಿಳಿಸಿದ್ದಾರೆ.

ಕಾಮೆಂಟ್ ಬಿಡಿ

Join Us