ವಿವಾಹವಾಗ ಬೇಕು ಎಂದು ಅಶ್ಲೀಲ ಫೋಟೋಗಳ ಮೂಲಕ ಬಾಲಕಿಗೆ ಬ್ಲಾಕ್‌ಮೇಲ್
ಮೂಡಿಗೆರೆ: ಚಿಕ್ಕಮಗಳೂರಿನ ಬಿಳುಗುಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಅನ್ಯಕೋಮಿನ ಅಪ್ರಾಪ್ತ ಬಾಲಕನ ನಡುವಿನ ವಿಚಾರವು ಈಗ ಸಂಘರ್ಷಕ್ಕೆ ಕಾರಣವಾಗಿದ್ದು, ಪೊಲೀಸರು ಎರಡು ಗುಂಪುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರದ ಒತ್ತಾಯ ಮತ್ತು ಅಶ್ಲೀಲ ಫೋಟೋಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಆರೋಪ ಒಂದೆಡೆಯಾದರೆ, ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಮತ್ತೊಂದೆಡೆ ಕೇಳಿಬಂದಿದೆ. ಬಾಲಕಿಯ ತಂದೆ ನೀಡಿದ ದೂರಿನನ್ವಯ, ಅಪ್ರಾಪ್ತ ಬಾಲಕ ಮತ್ತು ಆತನ ತಂದೆ ಇಲಿಯಾಸ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬಾಲಕಿಯು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ತನ್ನನ್ನು ವಿವಾಹವಾಗಬೇಕು ಎಂದು ಬಾಲಕ ಒತ್ತಾಯಿಸುತ್ತಿದ್ದ, ಬಾಲಕಿ ಒಪ್ಪದಿದ್ದಾಗ ಆಕೆಯ ಕೆಲವು ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿ ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ (BNS) 329(4), ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 (ಮತಾಂತರ ನಿಷೇಧ ಕಾಯ್ದೆ), ಐಟಿ ಆಕ್ಟ್ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಾಮೆಂಟ್ ಬಿಡಿ