ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಶಂಕಿತ ಆರೋಪಿಗಳನ್ನು ವಶಕ್ಕೆ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು ಎಂದು ಗುರುತಿಸಲಾಗಿದ್ದು, ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್ಗೆ ಕೆಲಸ ಮಾಡಲು ಸಾಥ್ ನೀಡುತ್ತಿದ್ದರು. ಸದ್ಯ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಆ ಪೈಕಿ ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ.
ಕೊಲೆ ಕೃತ್ಯದಲ್ಲಿ ಭಾಗಿಯಾದವರ ಜೊತೆ ಹಿಂದೂ ಯುವಕರು ಸೇರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತು ಕುಳಿತಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಕಾಮೆಂಟ್ ಬಿಡಿ