ಕ್ರೈಂ

ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ

ಮೂಡುಬಿದಿರೆ: ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ವರದಿಯಾಗಿದೆ.

2024ರಲ್ಲಿ ಮೂಡುಬಿದಿರೆ ತಾಲೂಕಿನ ಮಿಜಾರು ಬಳಿಯ ಎನ್‌ಎಚ್169ರಲ್ಲಿ ನಡೆದಿದ್ದ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಸುಮಿತ್ರಾ ಹಾಗೂ ಅವರ ಪುತ್ರಿಗೆ ಬಸ್ ಮಾಲಕನಿಗೆ ಒತ್ತಡ ಹಾಕಿ ಸಮಿತ್ ರಾಜ್ 5 ಲಕ್ಷ ರೂ. ಪರಿಹಾರ ತೆಗೆಸಿಕೊಟ್ಟಿದ್ದ ಎನ್ನಲಾಗಿದೆ.

ಇದೇ ವಿಚಾರವಾಗಿ ಖಾಸಗಿ ಬಸ್ ಮಾಲಕ ಸಮಿತ್ ರಾಜ್ ವಿರುದ್ಧ ಬೆದರಿಕೆ ಮತ್ತು ಅಕ್ರಮ ಹಣ ವಸೂಲಿ ಮಾಡಿರುವ ಆರೋಪದಲ್ಲಿ 2024ರಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇತ್ತೀಚಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಈ ಪ್ರಕರಣದ ವಿಚಾರಣೆ ನಡೆಸುವಂತೆ ಮೂಡುಬಿದಿರೆ ಪೊಲೀಸರಿಗೆ ಆದೇಶಿಸಿದ್ದರು. ಅದರಂತೆ ಪ್ರಕರಣದ ಆರೋಪಿ ಸಮಿತ್ ರಾಜ್ ಧರೆಗುಡ್ಡೆಯನ್ನು ಬಂಧಿಸಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಜೂ.26ರಂದು ಠಾಣೆಗೆ ಕರೆ ತಂದಿದ್ದರು.

ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನ ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಪೊಲೀಸರು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ. ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. 

ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್​ರಿಂದ ದೂರು ನೀಡಲಾಗಿದ್ದು, ಮೂಡಬಿದಿರೆ ಠಾಣೆಯಲ್ಲಿ ಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಳುಹಿಸುವ ಅಥವಾ ಸಾಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.

ಕಾಮೆಂಟ್ ಬಿಡಿ

Join Us