ಕ್ರೈಂ

ಹೆಜಮಾಡಿ ಗರಡಿಯಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ ಮೂವರು ಕಳ್ಳಿಯರು ಅರೆಸ್ಟ್

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಲಪಟಾಯಿಸಿದ ಮೂವರು ಕಳ್ಳಿಯರನ್ನು ಅರೆಸ್ಟ್ ಮಾಡಲಾಗಿದೆ.

ಬಂಧಿತರು ತಮಿಳುನಾಡಿನ ಶೀಥಲ್ , ಕಾಳಿಯಮ್ಮ , ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ಮೂವರು ಕಳ್ಳಿಯರು ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ.

ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ಸಂದರ್ಭದಲ್ಲಿ ಮೂವರು ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಕದ್ದಿದ್ದಾರೆ. ಸಿಸಿಟಿವಿಯಲ್ಲಿ ಮೂವರ ಕರಾಮತ್ತು ಸೆರೆಯಾಗಿದೆ. ಸುಮಾರು 2 ಲಕ್ಷ ಮೌಲ್ಯದ ಚಿನ್ನದ ಸರ ಎಂದು ಹೇಳಲಾಗಿದೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಅದರಂತೆ ತನಿಖೆ ನಡೆಸಿದ ಪೊಲೀಸರು, ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾಮೆಂಟ್ ಬಿಡಿ

Join Us