ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ
ಉಡುಪಿ: ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಿಂದ ಶೋಧನಾ ವಾರಂಟ್ ಪಡೆದು, ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗಳಲ್ಲಿ ಶುಕ್ರವಾರ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದರು.
ಮಂಗಳೂರು ಲೋಕಾಯುಕ್ತ ಎಸ್.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿ.ವೈ.ಎಸ್.ಪಿ. ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್, ಮಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಭಾರತಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
‘ಶೋಧದ ವೇಳೆ ವಿಲೇವಾರಿಗೆ ಬಾಕಿಯಿದ್ದ, ಕಾನೂನು ಬಾಹಿರವಾಗಿ ವಿಲೇವಾರಿ ಮಾಡಿದ ಸುಮಾರು 200 ಕಡತಗಳು ಪತ್ತೆಯಾಗಿವೆ. ಶೋಧ ಕಾರ್ಯ ಮುಂದುವರಿಯಲಿದೆ. ಮುಂದಿನ ಕಾನೂನು ಕ್ರಮಕ್ಕೆ ಬೆಂಗಳೂರು ಲೋಕಾಯುಕ್ತರಿಗೆ ವಿವರವಾದ ವರದಿ ಸಲ್ಲಿಸಲಾಗುವುದು’ ಎಂದು ಹಾಲಮೂರ್ತಿ ರಾವ್ ಅವರು ತಿಳಿಸಿದ್ದಾರೆ.
ಕಾಮೆಂಟ್ ಬಿಡಿ