ಎಂಆರ್‌ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆ- ಇಬ್ಬರು ಸಿಬ್ಬಂದಿ ಮೃತ್ಯು, ಇನ್ನೋರ್ವ ಗಂಭೀರ
ಮಂಗಳೂರು: ಸುರತ್ಕಲ್‌ನ ಎಂಆರ್‌ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದು, ಇನ್ನೋರ್ವ ನ ಸ್ಥಿತಿ ಗಂಭೀರವಾಗಿದೆ.
ದೀಪ ಚಂದ್ರ ಭರ್ ಮತ್ತು ಬಿಜಿಲ್ ಪ್ರಸಾದ್ ಸಾವನ್ನಪ್ಪಿದ ಸಿಬ್ಬಂದಿ. ಮಂಗಳೂರು ತೈಲ ಶುದ್ಧೀಕರಣ ಘಟಕದ ಆಯಿಲ್ಮೂವ್‌ಮೆಂಟ್ ವಿಭಾಗದಲ್ಲಿ ಘಟನೆ ನಡೆದಿದೆ. ಆಯಿಲ್ ಮೂವ್‌ಮೆಂಟ್ ವಿಭಾಗದಲ್ಲಿ ದೋಷ ಕಂಡು ಬಂದ ಹಿನ್ನೆಲೆ ಪರಿಶೀಲನೆಗೆಂದು ಸಿಬ್ಬಂದಿ ತೆರಳಿದ್ದರು. ಟ್ಯಾಂಕ್ ಮೇಲ್ಛಾವಣಿಗೆ ಹೋದ ಬೆನ್ನಲ್ಲೇ ಇಬ್ಬರೂ ಅಸ್ವಸ್ಥಗೊಂಡಿದ್ದಾರೆ.ತಕ್ಷಣದ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇಬ್ಬರ ರಕ್ಷಣೆಗೆ ಮುಂದಾಗಿದ್ದ ಮತ್ತೊಬ್ಬ ಸಿಬ್ಬಂದಿ ವಿನಾಯಕ ಮಯಗೇರಿ ಎಂಬವರ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಆರ್‌ಪಿಎಲ್ ಆಡಳಿತ ಘಟನೆಯ ತನಿಖೆಗೆ ಸಮಿತಿ ರಚಿಸಿದೆ. ಗ್ರೂಪ್ ಜನರಲ್ ಮ್ಯಾನೇಜರ್‌ಗಳನ್ನೊಳಗೊಂಡ ಉನ್ನತ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದೆ.
ಕಾಮೆಂಟ್ ಬಿಡಿ