ಜಿಲ್ಲಾ ಸುದ್ದಿಗಳು

ಕರಾವಳಿಗೆ ಮೂರು ದಿನ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿಗೆ ಮುಂದಿನ ಮೂರು ದಿನ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೊಂಚ ಬಿಡುವು ನೀಡಿದ್ದ ವರುಣಾ, ಇಂದಿನಿಂದ ಮತ್ತೆ ಜೋರು ಮಳೆ ಸುರಿಸುವ ಮುನ್ಸೂಚನೆ ನೀಡಿದ್ದಾನೆ. ಕರಾವಳಿ ಜಿಲ್ಲೆಗಳಾದ ಉಡುಪಿ , ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ಕಾಮೆಂಟ್ ಬಿಡಿ

Join Us