ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಬಾರೀ ಮಳೆಯಾಗುವ ಸಾಧ್ಯತೆ
ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು, ತುಂತುರು ಮಳೆಯಾಗುತ್ತಿದೆ. ಇನ್ನು ಅಕ್ಟೋಬರ್ 25 ರವರೆ ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ, ನಾಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರಲಿದೆ. ಮೂರು ದಿನ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಇರಲಿದೆ.
ಕಾಮೆಂಟ್ ಬಿಡಿ