ಜಿಲ್ಲಾ ಸುದ್ದಿಗಳು

ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಜೇನುಗೂಡಿಗೆ ಕೈ ಹಾಕಿದೆ: ಶಾಸಕ ಯಶ್​ಪಾಲ್ ಸುವರ್ಣ

ಉಡುಪಿ: ಶಾಲಾ ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆಯವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಜೇನುಗೂಡಿಗೆ ಕೈ ಹಾಕಿದೆ ಎಂದು  ಶಾಸಕ ಯಶ್​ಪಾಲ್ ಸುವರ್ಣ ಹೇಳಿದ್ದಾರೆ. ಸರ್ಕಾರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡುತ್ತಿದ್ದು, ಮಮತಾ ಬ್ಯಾನರ್ಜಿ ಮಾದರಿ ಕರ್ನಾಟಕ ಮಾಡಲು ಹೊರಟಿದ್ದಾರೆ. ಮಮತಾ ಬ್ಯಾನರ್ಜಿಗೂ ಸಿಎಂ ಸಿದ್ದರಾಮಯ್ಯಗೂ ವ್ಯತ್ಯಾಸ ಇಲ್ಲ. ಹಿಂದೆ ಹೋರಾಟ ಆದಾಗ ಆ ವಿದ್ಯಾರ್ಥಿಗಳ ಹಿಂದೆ ಇದ್ದಿದ್ದು PFI. ವಿದ್ಯಾರ್ಥಿಗಳಲ್ಲಿ ವಿಷ ಬೀಜ ಬಿತ್ತುವ ಕೆಲಸ ಸರ್ಕಾರ ಮಾಡುತ್ತಿದೆ. ಸುಪ್ರೀಂಕೋರ್ಟ್​​ನಲ್ಲಿ ವಿಚಾರ ಬಾಕಿ ಇರುವಾಗ ನಿರ್ಧಾರ ಮಾಡಲು ಆಗಲ್ಲ. ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ನಾವು ಹೋರಾಟ ಮಾಡುತ್ತೇವೆ. ಮುಂದಾಗುವ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತೆ ಎಂದವರು ಎಚ್ಚರಿಸಿದ್ದಾರೆ.

ಕಾಮೆಂಟ್ ಬಿಡಿ

Join Us