ಜುಲೈ 25: ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ಶಾಲೆ, ಕಾಲೇಜುಗಳಿಗೆ ರಜೆ
ಮಂಗಳೂರು: ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಯನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮಕ್ಕಳು ತಗ್ಗು ಪ್ರದೇಶಗಳು, ಕೆರೆಗಳು, ಸಮುದ್ರ ತೀರ ಮತ್ತು ನದಿ ದಡಗಳಿಗೆ ಹೋಗದಂತೆ ನೋಡಿಕೊಳ್ಳಲು ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಲು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ.
ಕಾಮೆಂಟ್ ಬಿಡಿ