ಜಿಲ್ಲಾ ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳ ವರ್ಗಾವಣೆ; ಹೊಸ ಜಿಲ್ಲಾಧಿಕಾರಿಗಳ ನೇಮಕ

ಮಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಅಧಿಕಾರಿಗಳನ್ನು ನೇಮಿಸಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೆ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿ ಯಾಗಿ ನೇಮಿಸಲಾಗಿದೆ.

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.

ಮಂಗಳವಾರ ಹೊರಡಿಸಲಾದ ಸರ್ಕಾರಿ ಅಧಿಸೂಚನೆಯ ಪ್ರಕಾರ (ಸಂಖ್ಯೆ e-DPAR 197 SAS 2025) ಕರ್ನಾಟಕದಾದ್ಯಂತ 17 ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಬದಲಾವಣೆಗಳು ಸೇರಿವೆ. ಎಲ್ಲಾ ವರ್ಗಾವಣೆಗಳು ತಕ್ಷಣದಿಂದ ಜಾರಿಗೆ ಬರುತ್ತವೆ ಮತ್ತು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತವೆ. ಹೊಸದಾಗಿ ನೇಮಕಗೊಂಡ ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

ಕಾಮೆಂಟ್ ಬಿಡಿ

Join Us