ಜಿಲ್ಲಾ ಸುದ್ದಿಗಳು

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದ ಮಂಗಳೂರು ಮೂಲದ ಕೋ ಪೈಲಟ್‌ ಕ್ಲೈವ್ ಕುಂದರ್ ಸಾವು

ಮಂಗಳೂರು : ಗುಜರಾತ್ ನ ಅಹಮದಾಬಾದ್ ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಪೈಲೆಟ್ ಆಗಿ ಮಂಗಳೂರು ಮೂಲದ ಕ್ಲೈವ್ ಕುಂದರ್ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಪ್ರಸಕ್ತ ಮುಂಬೈ ನಿವಾಸಿಯಾಗಿರುವ ಕ್ಲೈವ್ ಕುಂದರ್ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದಲ್ಲಿ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.ಕ್ಲೈವ್ ಕುಂದರ್ ಮುಂಬೈನಲ್ಲಿ ನೆಲೆಸಿದ್ದು ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ ತರಬೇತಿ ಪಡೆದಿದ್ದರು.

ಅಹಮದಾಬಾದ್‌ನಿಂದ ಲಂಡನ್‌ಗೆ ಮಧ್ಯಾಹ್ನ 1:39ಕ್ಕೆ ಟೇಕಾಫ್‌ ಆಗಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ಸಮೀಪದ ಮೇಘನಿ ನಗರದ ವಸತಿ ಪ್ರದೇಶದಲ್ಲಿವ ಮೆಡಿಕಲ್‌ ಹಾಸ್ಟೆಲ್‌ನ ಅಡುಗೆ ಮನೆ ಮೇಲೆ ಬಿದ್ದಿದೆ. ಇಬ್ಬರು ಪೈಲಟ್‌, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಿದೆ.

ಕಾಮೆಂಟ್ ಬಿಡಿ

Join Us