ಸಾರ್ವಜನಿಕ ಹಿಂದೂ ರುದ್ರಭೂಮಿ ಕೆರೆಕಾಡು ಇದರ ನೂತನ ಪದಾಧಿಕಾರಿಗಳ ಆಯ್ಕೆ
ಕೆರೆಕಾಡು: ಸಾರ್ವಜನಿಕ ಹಿಂದೂ ರುದ್ರಭೂಮಿ, ಕೆರೆಕಾಡು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಸಾರ್ವಜನಿಕ ಹಿಂದೂ ರುದ್ರಭೂಮಿ ಕೆರೆಕಾಡು ಇದರ ನೂತನ ಅಧ್ಯಕ್ಷರಾಗಿ ಶ್ರೀ ಲಕ್ಷ್ಮಣ್ ಸಾಲಿಯನ್, ಪುನರೂರು ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಶ್ರೀ ದಿವೇಶ್ ದೇವಾಡಿಗ ಹಾಗೂ ಶ್ರೀ ಪ್ರಶಾಂತ್ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಆಚಾರ್ಯ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಶ್ರೀ ಕರುಣಾಕರ ಕುಂದರ್ ಮತ್ತು ಶ್ರೀ ಧನಂಜಯ ಶೆಟ್ಟಿಗಾರ್ ಅವರು ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಶ್ರೀ ಪಿ.ಆರ್. ರಾಜೇಶ್ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ನೂತನ ಪದಾಧಿಕಾರಿಗಳು ರುದ್ರಭೂಮಿಯ ಅಭಿವೃದ್ಧಿ, ಸ್ವಚ್ಛತೆ ಹಾಗೂ ಅಗತ್ಯ ಮೂಲಸೌಕರ್ಯಗಳ ಸುಧಾರಣೆಗೆ ಆದ್ಯತೆ ನೀಡಿ, ಸಾರ್ವಜನಿಕರ ಸಹಕಾರದೊಂದಿಗೆ ಸಂಘದ ಚಟುವಟಿಕೆಗಳನ್ನು ಮುನ್ನಡೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನೂತನ ಪದಾಧಿಕಾರಿಗಳಿಗೆ ಸಾರ್ವಜನಿಕರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ.
ಕಾಮೆಂಟ್ ಬಿಡಿ