ಹುಡುಗರು ಚಿತ್ರದಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು
ಪುನೀತ್ ರಾಜ್ಕುಮಾರ್ ಅವರೊಂದಿಗೆ ‘ಹುಡುಗರು’ ಚಿತ್ರದಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ ಅವರು 42ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ಮರಣವು ಅಭಿಮಾನಿಗಳಲ್ಲಿ ಮತ್ತು ಚಲನಚಿತ್ರ ರಂಗದಲ್ಲಿ ಆಘಾತ ಹಾಗೂ ದುಃಖವನ್ನುಂಟು ಮಾಡಿದೆ. ಮರಣೋತ್ತರ ಪರೀಕ್ಷೆಗಾಗಿ ಅವರ ದೇಹವನ್ನು ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮುಂಬೈನ ಅಂಧೇರಿ ಲೋಖಂಡ್ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ ಹೊಂದಿದ್ದರು.
ಶೆಫಾಲಿ ಜನಿಸಿದ್ದು 1982ರ ಡಿಸೆಂಬರ್ 15ರಂದು. ಅವರು ಮುಂಬೈನಲ್ಲಿ ಹುಟ್ಟಿ, ಬೆಳೆದರು. 2004ರಲ್ಲಿ ಅವರು ಹರ್ಮೀತ್ ಸಿಂಗ್ನ ವಿವಾಹ ಆದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇವರು ವಿಚ್ಛೇದನ ಪಡೆದರು. 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ವಿವಾಹ ಆದರು. ಎರಡನೇ ಪತಿಯ ಜೊತೆ ಇನ್ನೂ ಅವರು ಸಂಸಾರ ನಡೆಸುತ್ತಿದ್ದರು.
ಕಾಮೆಂಟ್ ಬಿಡಿ