ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೇರುವ ಮೊದಲ ವ್ಯಕ್ತಿ ಎನಿಸಿಕೊಳ್ಳಲಿದ್ದಾರೆ.

ನವದೆಹಲಿ: ಎನ್‌ಡಿಎ ಅಭ್ಯರ್ಥಿ ಮುರ್ಮು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೇರುವ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿ ಎನಿಸಿಕೊಳ್ಳಲಿದ್ದಾರೆ. ಅಲ್ಲದೇ ಪ್ರತಿಭಾ ಪಾಟೀಲ್‌ ಬಳಿಕ ದೇಶದ 2ನೇ ಮಹಿಳಾ ರಾಷ್ಟ್ರಪತಿಯಾಗಲಿದ್ದಾರೆ. ಜಾರ್ಖಂಡನ ಮಾಜಿ ರಾಜ್ಯಪಾಲೆಯಾಗಿರುವ ಮುರ್ಮು ಈವರೆಗಿನ ಅತಿ ಕಡಿಮೆ ವಯಸ್ಸಿನ ರಾಷ್ಟ್ರಪತಿ ಹಾಗೂ ಸ್ವಾತಂತ್ರ್ಯಾನಂತರ ಹುಟ್ಟಿದ ಮೊದಲ ರಾಷ್ಟ್ರಪತಿ ಕೂಡಾ ಎನಿಸಿಕೊಳ್ಳಲಿದ್ದಾರೆ. ಪ್ರಸ್ತುತ ರಾಷ್ಟ್ರಪತಿಯಾಗಿರುವ ರಾಮನಾಥ್‌ ಕೋವಿಂದ್‌ ಅವರ ಅಧಿಕಾರಾವಧಿ ಜು.24 ರಂದು ಮುಕ್ತಾಯವಾಗಲಿದ್ದು, ಜು.25ಕ್ಕೆ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿಕೊಳ್ಳಲಿದ್ದಾರೆ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.