ಕಾಂಗ್ರೆಸ್‌ಗೆ ಬಿಗ್‌ ಶಾಕ್;‌ ಗೋವಾದ 11 ಶಾಸಕರ ಪೈಕಿ 8 ಮಂದಿ ಬಜೆಪಿಗೆ ಸೇರ್ಪಡೆ.

ಗೋವಾ: ಗೋವಾದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ, ಅದರ ಎಂಟು ಶಾಸಕರು ಇಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ದಿಗಂಬರ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಕೇಸರಿ ಪಾಳಯಕ್ಕೆ ಸೇರ್ಪಡೆಗೊಂಡ ಎಂಟು ಕಾಂಗ್ರೆಸ್ ಶಾಸಕರು. ಈ 8 ಕಾಂಗ್ರೆಸ್  ಶಾಸಕರು ಇಂದು ಗೋವಾ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ.

ಈ ಬಗ್ಗೆ  ಪಕ್ಷ ಬದಲಾಯಿಸಿದ ಮೈಕೆಲ್ ಲೋಬೋ ಮಾತನಾಡಿ "ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈಗಳನ್ನು ಬಲಪಡಿಸಲು ನಾವು ಬಿಜೆಪಿಗೆ ಸೇರಿದ್ದೇವೆ, ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ" ಎಂದು ಹೇಳಿದ್ದಾರೆ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.